ರಜತ ಮಹೋತ್ಸವ ಆಚರಣೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ

ಉಡುಪಿ: ಉಡುಪಿ ಜಿಲ್ಲೆ 25 ವರ್ಷ ಪೂರೈಸಿದ ಹಿನ್ನೆಲೆ ಆಗಸ್ಟ್ 25 ರಂದು ರಜತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರ ಆಗಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆಯಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ, ಕಾರ್ಯಕ್ರಮಕ್ಕೆ ಆಗಮಿಸುವ ಕುಂದಾಪುರ, ಮಲ್ಪೆ, ಕಾಪು ಹಾಗೂ ಪಡುಬಿದ್ರೆ ಕಡೆಯಿಂದ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಸೈಂಟ್ ಸಿಸಿಲಿ […]
ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ಹೆಮ್ಮೆಯ ವಿಚಾರ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: 1997 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರ್ಪಟ್ಟು ಸ್ವತಂತ್ರ ಜಿಲ್ಲೆಯಾಗಿ ಮಾರ್ಪಟ್ಟ ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ನನಗೆ ಹೆಮ್ಮೆ ನೀಡುವ ವಿಷಯ. ಅಂದಿನಿಂದ ಇಂದಿನವರೆಗೆ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಪರ ಚಟುವಟಿಕೆಗಳು ನಡೆದಿದ್ದು, ಮುಂದೆಯೂ ಕೂಡ ಅನೇಕ ಅಭಿವೃದ್ಧಿ ಕೆಲಸಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಮಂಗಳವಾರ ನಗರದ ಐ.ಎಮ್.ಎ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ […]
ಆಗಸ್ಟ್ 25ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ: ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆಗೊಳಿಸಲಾಗಿದ್ದು, ಆಗಸ್ಟ್ 25ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಟಾಟನಾ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 2.30 ರಿಂದ 3.30ರ ವರೆಗೆ ಬೋರ್ಡು ಹೈಸ್ಕೂಲಿನಿಂದ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್ ಮರೆವಣಿಗೆ ಸಾಗಿ ಬರಲಿದೆ. ಅಪರಾಹ್ನ 3.30 ರಿಂದ ಸಂಜೆ 5.00 ರವರೆಗೆ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 05.00 ಗಂಟೆಗೆ ಸರಿಯಾಗಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಿಂದ ಕಾರ್ಯಕ್ರಮದ ಉದ್ಟಾಟನೆ ನಡೆಯಲಿದೆ. ಸಭಾ ಕಾರ್ಯಕ್ರಮ […]