ಉಡುಪಿ:ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಿರಿಧಾನ್ಯಗಳನ್ನು ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿಯಾಗುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಿರಿಧಾನ್ಯಗಳನ್ನು ನಮ್ಮ ಪೂರ್ವಜರು ಈ ಹಿಂದೆ ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, […]