ಉಡುಪಿ: ತೆಂಕನಿಡಿಯೂರು ಸರಕಾರಿ ಕಾಲೇಜಿನಲ್ಲಿ ಕೌಶಲ್ಯ ಶಿಕ್ಷಣ; ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದೊಂದಿಗೆ ಒಡಂಬಡಿಕೆ

ಉಡುಪಿ: ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ಶಿಕ್ಷಣವನ್ನು ನೀಡುವುದಕ್ಕಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರವು ಮಣಿಪಾಲದ ಡಾ.ಟಿ.ಎಂ.ಪೈ ಫೌಂಡೇಶನ್‌ನ ಅಂಗಸಂಸ್ಥೆಯಾದ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನೊಂದಿಗೆ ಒಡಂಬಡಿಕೆ (ಎಂಓಯು) ಮಾಡಿ ಕೊಂಡಿದೆ. ಕೌಶಲ್ಯಾಧಾರಿತ ಕೋರ್ಸುಗಳ ರಚನೆ, ಅಭಿವೃದ್ಧಿ ಮತ್ತು ನಿರ್ವಹಣೆ, ಉದ್ಯೋಗ ಕೌಲ್ಯವನ್ನು ವೃದ್ಧಿಸು ವುದು, ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್, ವಿವಿಧ ಶೈಕ್ಷಣಿಕ ಮತ್ತು ವೃತ್ತಿಪರ ಕಾರ್ಯಾಗಾರಗಳು, ಕೈಗಾರಿಕಾ ಭೇಟಿ, ಕೈಗಾರಿಕಾ ವಾತಾವರಣ ಪರಿಚಯಿಸುವಿಕೆ, ಎರಡು ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳ ವಿನಿಮಯ […]