ಸೇವೆಯಿಂದ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ: ಡಾ. ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕ್ರೈಸ್ತ ಸಮುದಾಯದ ಸೇವೆಯನ್ನು ಎಲ್ಲಾ ವ್ಯಕ್ತಿಗಳು ಗುರುತಿಸುತ್ತಾರೆ. ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಹಾಗೂ ಸಾಮಾಜಿಕ ಸೇವೆ ಸಂಘಟನೆಗಳಲ್ಲಿ ಚುನಾಯಿತರಾದವರು ದೀನದಲಿತರ ಹಿಂದುಳಿದವರ ನೋವುಗಳಿಗೆ […]