ಉಡುಪಿ :ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರಕುವಂತಾಗಲಿ : ಶಾಸಕ ಯಶ್ ಪಾಲ್ ಎ.ಸುವರ್ಣ

ಉಡುಪಿ: ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗಧಿತಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಶುಕ್ರವಾರ ನಗರದ ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ […]