ಉಡುಪಿ: ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಸುದರ್ಶನ ಮಂತ್ರ ಯಾಗ

ಉಡುಪಿ: ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.ದೇಶದ ಗಡಿಭಾಗದಲ್ಲಿ ಶತ್ರುರಾಷ್ಟ್ರಗಳ ಸವಾಲುಗಳನ್ನೆದುರಿಸಿ ಯುದ್ಧ ಸನ್ನದ್ಧಸ್ಥಿತಿಯಲ್ಲಿ ದಿಟ್ಟತನದಿಂದ ದೇಶವನ್ನು ಕಾಯುತ್ತಾ ಸೈನಿಕರ ಯೋಗಕ್ಷೇಮ ಮತ್ತು ದೇಶದ ಸುರಕ್ಷೆ ಸಮೃದ್ಧಿಗಾಗಿ ಪ್ರಾರ್ಥಿಸಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಂಕಲ್ಪನಾನುಸಾರ ಈ ಯಾಗ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪ್ರಾಚೀನ ಸ್ಕಂದಾಲಯ ಮುಚ್ಚುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಹಾಸುದರ್ಶನ ಮಂತ್ರ ಯಾಗ ನೆರವೇರಿತು. ವಿದ್ವಾನ್ ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಗಳ […]