ಉಡುಪಿ:ಜಿಲ್ಲೆಯಲ್ಲಿ ಏಕವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರ ಹೊಸ ಅಧಿಸೂಚನೆಯಲ್ಲಿ ಕೆಲವು ವಿನಾಯಿತಿ ಅಗತ್ಯವಿದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ […]