ಉಡುಪಿ ಎಸ್ಪಿ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಿದವು. ಹಿಂದೂ ಕಾರ್ಯಕರ್ತರು ಉಡುಪಿ ಎಸ್ಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಎಸ್ಪಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು. ಆರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ […]