ಮಾದಕ ವಸ್ತು ಮಾರಾಟ ಯತ್ನ: ಆರೋಪಿಯ ಬಂಧನ; ಗಾಂಜಾ ಎಂಡಿಎಂಎ ವಶ

ಉಡುಪಿ: ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸರಳೆಬೆಟ್ಟು ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.  ಡಿಸೆಂಬರ್ 27ರಂದು ರಂದು ಖಚಿತ ಮಾಹಿತಿ ಮೇಲೆ ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ದಾಳಿ ಮಾಡಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳನ್ನು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ […]

ಮಂಗಳಮುಖಿಯರಿಂದ ಅನೈತಿಕ ಕಾರ್ಯ ದೂರು ಹಿನ್ನೆಲೆ: ಖುದ್ದು ಕಾರ್ಯಾಚರಣೆ ನಡೆಸಿದ ಎಸ್ಪಿ ಅಕ್ಷಯ್ ಹಾಕೆ

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಸಮೀಪ ಮಂಗಳಮುಖಿಯರನ್ನು ಅನೈತಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಡಿ. 16 ರಂದು ತಡ ರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ಖುದ್ದು ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೇಯ ಸಂದರ್ಭ ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ನಗರದ ಬಸ್ ನಿಲ್ದಾಣಗಳಲ್ಲಿ ರಾತ್ರಿ ಹೊತ್ತಿನಲ್ಲಿ ಕೆಲವು ಮಂಗಳಮುಖಿಯರು ಸಾರ್ವಜನಿಕರ ವಾಹನಗಳನ್ನು ಅಡ್ಡಹಾಕಿ ತೊಂದರೆ ಕೊಡುವ ಬಗ್ಗೆ ವರದಿಯಾಗಿತ್ತು. ಇದಲ್ಲದೆ ದಾರಿದೀಪಗಳನ್ನು ಒಡೆದು ಹಾಕಿ ಜನರಿಂದ ಬಲವಂತವಾಗಿ ಹಣ […]

ಸವಾರರು ಹತ್ತಿಳಿಯುವಾಗ ಅಪಘಾತಕ್ಕೆ ಕಾರಣವಾಗುವ ಬಸ್ ಸಿಬ್ಬಂದಿ ವಿರುದ್ದ ಕಠಿಣ ಕ್ರಮ: ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ

ಉಡುಪಿ: ಇತ್ತೀಚಿನ ದಿನಗಳಲ್ಲಿ ಬಸ್ ಹತ್ತುವಾಗ ಮತ್ತು ಇಳಿಯುವಾಗ ಬಸ್ ಚಾಲಕ ಮತ್ತು ನಿರ್ವಾಹಕರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತನದ ವರ್ತನೆಯಿಂದಾಗಿ ಅನೇಕರು ಬಸ್ ನ ಚಕ್ರದಡಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಇಂತಹ ಅಪಘಾತಗಳಿಗೆ ನೇರವಾಗಿ ಕಾರಣವಾಗುವ ಬಸ್ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಪ್ರಯಾಣಿಕ ಬಸ್‌ಗಳಲ್ಲಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ನಿರ್ಲಕ್ಷ್ಯದಿಂದ ಪ್ರಯಾಣಿಕರು ಇಳಿಯುವ […]

ಅಕ್ಷಯ್ ಹಾಕೆ ಮಚ್ಚಿಂದ್ರ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ: ಎನ್.ವಿಷ್ಣುವರ್ಧನ್ ಗುಪ್ತಚರ ಇಲಾಖೆಗೆ ವರ್ಗಾವಣೆ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರು ಬೆಂಗಳೂರಿನ ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, 2015ರ ಐಪಿಎಸ್ ಬ್ಯಾಚಿನ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.