ಭಾಷಣ ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ವೇದಿಕೆ – ವಂ|ರೋಶನ್ ಡಿಸೋಜಾ

ಉಡುಪಿ: ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ಸೂಕ್ತ ವೇದಿಕೆ ಎಂದರೆ ಭಾಷಣ. ಈ ಮೂಲಕ ಯಾವುದೇ ರೀತಿಯ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ ವಂ|ಡಾ| ರೋಶನ್ ಡಿಸೋಜಾ ಹೇಳಿದರು. ಅವರು ಭಾನುವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಕೊಂಕಣಿ ಮತ್ತು ಕನ್ನಡ ಭಾಷಣ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳ […]