ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ ಹರಿರಾಂ ಶಂಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ‌ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆ ವಾಹನಗಳಿಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್(ವೇಗ ನಿಯಂತ್ರಕ) ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು, ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ […]