ಉಡುಪಿ:ಕರ್ನಾಟಕ ಕ್ರೀಡಾಕೂಟ ಸಮಾರೋಪ : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾಕ್ರೀಡಾಂಗಣದಲ್ಲಿ ನಡೆಯಲಿದೆ. ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. […]