ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ತೆಗೆದು ಹಾಕಿದ್ದು ಖಂಡನೀಯ: ನೀಲಾವರ ಸುರೇಂದ್ರ ಅಡಿಗ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದ್ದಾರೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ […]