ನ. 26ರಂದು ಉಡುಪಿ ಶ್ರೀಕೃಷ್ಣಮಠದಲ್ಲಿ ತಪ್ತಮುದ್ರಾಧಾರಣ ಕಾರ್ಯಕ್ರಮ
ಉಡುಪಿ: ಇದೇ ನವೆಂಬರ್ 26ರಂದು ಕಾರ್ತಿಕ ಶುದ್ಧ ಏಕಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ರಾಜಾಂಗಣದಲ್ಲಿ ಈ ಮುದ್ರಾಧಾರಣ ಕಾರ್ಯಕ್ರಮ ಜರಗಲಿದೆ. ಪರ್ಯಾಯ ಪೀಠಾಧೀಶ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಅವರಿಂದ ಮುದ್ರಾಧಾರಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸಿ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಈ ಮುದ್ರಾಧಾರಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.