ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಆ.1 ರಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಅದ್ದೂರಿ ಪ್ರಾರಂಭ

ಉಡುಪಿ:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಸೂರ್ಯೋದಯ ಕಾಲದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಜಪ ಯಜ್ಞದ ಅಂಗವಾಗಿ ವಿಶ್ವಾದ್ಯಂತ ಇರುವ ಶ್ರೀಕೃಷ್ಣ ಭಕ್ತರಿಗೆ ಸಾಮೂಹಿಕ ಶ್ರೀ ಕೃಷ್ಣ ಮಂತ್ರೋಪದೇಶ ನೀಡಿದರು. ಶ್ರೀಪಾದರ ಉಪದೇಶದ ನಂತರ ನೆರೆದಿದ್ದ ಭಕ್ತರು 108 ಬಾರಿ ಶ್ರೀ ಕೃಷ್ಣ ಮಂತ್ರ ಪಠಣ ಮಾಡಿದರು. ಇದಕ್ಕೂ ಮುನ್ನ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ […]