ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿಗೆ ಭರದ ಸಿದ್ಧತೆ; ಭಕ್ತರಿಗೆ ಹಂಚಲು ಒಂದು ಲಕ್ಷ ಉಂಡೆ, ಚಕ್ಕುಲಿ ತಯಾರು
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಜಿಲ್ಲಾಡಳಿತದ ಆದೇಶದಂತೆ ಸೆ.11ರಂದು ಮಧ್ಯಾಹ್ನ 3 ರಿಂದ ಸಂಜೆ 6ರವರೆಗೆ ಕೃಷ್ಣಮಠದ ರಥಬೀದಿಯಲ್ಲಿ ಸಂಪ್ರದಾಯದಂತೆ ಸಾಂಕೇತಿಕವಾಗಿ ಕೃಷ್ಣ ಜನ್ಮಾಷ್ಟಮಿ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಲಕ್ಷ ಚಕ್ಕುಲಿ, ಉಂಡೆ: ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ಇಲ್ಲದ್ದರಿಂದ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳ ಆಶಯದಂತೆ ಎಲ್ಲ ಭಕ್ತರಿಗೆ ಕೃಷ್ಣ ಪ್ರಸಾದ ಸಿಗಬೇಕು ಎಂಬ ಉದ್ದೇಶದಿಂದ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ […]