ಆ. 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ರಾಮಮಂದಿರ ಭೂಮಿ ಪೂಜೆಯ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ

ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ಆಗಸ್ಟ್ 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 11ರಿಂದ ಶ್ರೀರಾಮ ನಾಮ ಜಪ, ಭಜನೆ ನಡೆಯಲಿದ್ದು,  ಈ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಹಾಗೂ ಹಿರಿಯ ವಿಶ್ವಪ್ರಿಯ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು  ಸಂಘಟನೆ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ