ಉಡುಪಿ: ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರ್ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣೆ

ಉಡುಪಿ: ಉಡುಪಿ ಶ್ರೀ ಪಲಿಮಾರು ಮಠದ ಯೋಗದೀಪಿಕಾ ಟ್ರಸ್ಟ್ ಇವರು, ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಯೋಗದಲ್ಲಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರ್ ಇದರ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭವು ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದಾದರೂ ಶ್ರದ್ಧೆ ಮತ್ತು ಕಠೀಣ ಪರಿಶ್ರಮ ಬೇಕಾಗುತ್ತದೆ. ನಮ್ಮ ಸಂಸ್ಥೆಯಲ್ಲಿ ಕಲಿಯುವಂತ ವಿದ್ಯಾರ್ಥಿಗಳಿಗೆ ಸ್ವಂತ ಉದ್ಯೋಗ ಅಥವಾ ಬೇರೆ ಸಂಸ್ಥೆಗಳಲ್ಲಿ […]