ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ

ಉಡುಪಿ,ಆ.8: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗುಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು. ಕಾರ್ಯಾಲಯ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ ಸುಮಿತ್ರಾ ಕೆರೆಮಠ 9035679905 ಸಂಪರ್ಕಿಸಬಹುದು. ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ […]