ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ’ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಜನಾಕ್ರೋಶ ಯಾತ್ರೆ ಇಂದು ಉಡುಪಿಗೆ ಆಗಮಿಸಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಪ್ರತಿಭಟನಾ ಜಾಥಾ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಸಾಗಿ ಬಂತು. ಜಾಥಾದಲ್ಲಿ ವಿವಿಧ ಮೋರ್ಚಾ, […]