ಉಡುಪಿ:ಜಿಲ್ಲೆಯಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟ ಸ್ಪರ್ಧೆಗಳು ಜನವರಿಯಲ್ಲಿ ನಡೆಯಲಿದೆ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಗಳು 2025 ರ ಜನವರಿ 16 ರಿಂದ 23 ರ ವರೆಗೆ ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿ ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಂಪಿಕ್ಸ್ ಗೇಮ್ಸ್ಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]