ರಾಜಕೀಯ ಪಕ್ಷವೊಂದರ ವಿರುದ್ಧ ಹೇಳಿಕೆ ವಿಚಾರ: ಡಿಸಿ ಜಗದೀಶ್ ಸ್ಪಷ್ಟನೆ
ಉಡುಪಿ: ರಾಜಕೀಯ ಪಕ್ಷವೊಂದರ ವಿರುದ್ಧ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದಾರೆಂದು ಖಾಸಗಿ ವೆಬ್ ಸೈಟ್ ಸುದ್ದಿ ಪ್ರಕಟಿಸಿರುವ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದ್ದಾರೆ.