ಉಡುಪಿ:ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನುಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕೆಂದು ಅಧಿಕಾರಿಗಳಿಗೆಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ […]