ಬಿಜೆಪಿಯ ಪ್ರತಿಭಟನೆ, ಧರಣಿ ಅರ್ಥಹೀನ- ಬೀದಿ ನಾಟಕ ನಡೆಸುವುದನ್ನು ಬಿಟ್ಟು ಜನರ ಸಮಸ್ಯೆ ಬಗೆಹರಿಸಿ

ಉಡುಪಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮದೇ ಆಡಳಿತದ ವಿರುದ್ಧ ತಾವೇ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಗರು ಸ್ವತಃ ನಗೆಪಾಟಲಿಗೀಡಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಟೀಕಿಸಿದರು. ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಬಹುತೇಕ […]