ಉಡುಪಿ: ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿ; ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ; ಡಿಸಿ ಜಿ. ಜಗದೀಶ್ ಆದೇಶ
ಉಡುಪಿ: ಕೋವಿಡ್ ನಿಧಾನವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ. ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು […]