ಉಡುಪಿ: ಮದುವೆ ಸಹಿತ ವಿವಿಧ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ; ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಮಾರಂಭ ಹಾಗೂ ಆಚರಣೆಗಳ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯವು ಹೆಚ್ಚಾಗಿರುತ್ತದೆ. ಹೀಗಾಗಿ ರಾಜ್ಯ ಸರ್ಕಾರದ ಆದೇಶದಂತೆ ಸೋಂಕು ಹರಡುವ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಜನರ ಒಗ್ಗೂಡುವಿಕೆಗೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಆಚರಣೆಗಳು, ಸಮಾರಂಭಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ […]