ಉಡುಪಿ: ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ; ಬಸ್ ಸಂಚಾರ ಬಂದ್
ಉಡುಪಿ: ಸರ್ಕಾರದ ಆದೇಶದಂತೆ ಜಿಲ್ಲೆಯಾದ್ಯಂತ ಶುಕ್ರವಾರ (ಜುಲೈ 2) ಸಂಜೆ 7ರಿಂದ ಸೋಮವಾರ (ಜುಲೈ 5) ಬೆಳಿಗ್ಗೆ 5ರ ವರೆಗೆ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಘೋಷಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಸಾರ್ವಜನಿಕರ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಉಳಿದಂತೆ […]