ಉಡುಪಿ:ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಅನಿರೀಕ್ಷಿತ ದಾಳಿ ನಡೆಸಿ, ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯದೇ ಇರುವ ಅಂಗಡಿ-ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಸೂಕ್ತ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ […]