ಮೂಲಭೂತ ಸೌಲಭ್ಯ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ

ಉಡುಪಿ: ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಪೋನ್, ಸಿಯುಜಿ ಸಿಮ್, ಡೇಟಾ ಸಹಿತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜಿಲ್ಲೆಯ ಏಳು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಎಲ್ಲ ಬಗೆಯ ಮೊಬೈಲ್ ಮತ್ತು ಅಪ್ಲಿಕೇಶನ್ ಸೇವೆಗಳನ್ನು ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಉಡುಪಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.ಉಡುಪಿ ತಾಲೂಕು ಗ್ರಾಮ […]