ಉಡುಪಿ: ಫೆ.9ರಂದು ವಿಶ್ವಕರ್ಮ ಟ್ರಸ್ಟ್ ವಿದ್ಯಾರ್ಥಿವೇತನ ವಿತರಣೆ.

ಉಡುಪಿ: ಜಿಲ್ಲಾ ಶ್ರೀ ವಿಶ್ವಕರ್ಮ ಎಜುಕೇಶನಲ್ ಟ್ರಸ್ಟ್ ವತಿಯಿಂದ 2024-25ನೇ ಸಾಲಿನಲ್ಲಿ 205 ವಿದ್ಯಾರ್ಥಿಗಳಿಗೆ 9.15 ಲ.ರೂ. ವಿದ್ಯಾರ್ಥಿವೇತನ ವಿತರಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಬಿ.ಎ. ಆಚಾರ್ಯ ಮಣಿಪಾಲ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು. ಫೆ.9ರಂದು ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತಸರ ಗಣೇಶ್ ಆಚಾರ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಧಾರವಾಡ ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ| ಈರಣ್ಣ ಪತ್ತಾರ್ ಭಾಗವಹಿಸಲಿದ್ದಾರೆ ಎಂದರು. […]