ಉಡುಪಿ:ಮದ್ಯ ಮಾರಾಟ ನಿಷೇಧ : ಆದೇಶ ಹಿಂತೆಗೆತ

ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್‌ನ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ನಡೆಯದೇ ಇರುವ ಹಿನ್ನೆಲೆ, ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್ 21 ರ ಸಂಜೆ 5 ಗಂಟೆಯಿಂದ ನವೆಂಬರ್ 23 ರ ಸಂಜೆ 5 ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ:ಗ್ರಾಮ ಪಂಚಾಯತ್ ಉಪಚುನಾವಣೆ : ಸಂತೆ, ಜಾತ್ರೆ ನಿಷೇದ

ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲ ವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 […]

ಉಡುಪಿ:ಗ್ರಾಮ ಪಂಚಾಯತ್ ಉಪಚುನಾವಣೆ : ನಿಷೇಧಾಜ್ಞೆ ಜಾರಿ

ಉಡುಪಿ: ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂಕಡ್ತಲ ಗ್ರಾಮ ಪಂಚಾಯತಿಗಳ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾ ಪಟ್ಟಿಯನ್ನು ನಿಗಧಿಪಡಿಸಿ, ನವೆಂಬರ್ […]