ಉಡುಪಿ:ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ

ಉಡುಪಿ: ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆವಿದ್ಯಾ ಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಮಿ.ಮೀ. ಇದ್ದು, ವಾಸ್ತವಿಕವಾಗಿ 5261 ಮಿ.ಮೀ. ನಷ್ಟು ಮಳೆಯಾಗಿ ಶೇ.16 ರಷ್ಟು ಹೆಚ್ಚು […]