ಉಡುಪಿ: ಸ್ವರ್ಣ ನದಿಗೆ ಬಾಗಿನ ಅರ್ಪಿಸಿದ ಸಚಿವ ಸುನಿಲ್ ಕುಮಾರ್

ಉಡುಪಿ: ಉಡುಪಿಯ ಜೀವನದಿಯಾದ ಸ್ವರ್ಣ ನದಿಗೆ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಬಳಿಯ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಇಂದು ಬಾಗಿನ ಅರ್ಪಿಸಿದರು. ಸಚಿವರಿಗೆ ಪತ್ನಿ ಪ್ರಿಯಾಂಕ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮರಾವ್, ಎಸ್ಪಿ ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ […]