ಉಡುಪಿ:ಸೂರ್ಯ ಘರ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, […]