ಉಡುಪಿ: ಸ್ವರ್ಣಾರತಿ ಅಪೂರ್ವ ಕಾರ್ಯಕ್ರಮ; ಸ್ವರ್ಣಾನದಿಗೆ ಆರತಿ ಬೆಳಗಿದ ಪೇಜಾವರ ಶ್ರೀಪಾದರು
ಉಡುಪಿ: ಮಣಿಪಾಲ ಪೆರಂಪಳ್ಳಿ ಸಮೀಪ ಶೀಂಬ್ರ ಸ್ವರ್ಣಾ ನದಿಯ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ ಆರತಿ ಬೆಳಗಿಸುವ ಮೂಲಕ ಸ್ವರ್ಣಾರತಿ ಅಪೂರ್ವ ಕಾರ್ಯಕ್ರಮ ಇಂದು ನೆರವೇರಿತು. ಸ್ವರ್ಣೆಯ ರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಘಟಕದ ಚಿಂತನೆಯೊಂದಿಗೆ ನಡೆದ ಸ್ವರ್ಣಾರತಿ ಕಾರ್ಯಕ್ರಮದಲ್ಲಿ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಿಶೇಷ ಆರತಿಗಳನ್ನು ಬೆಳಗಿ ಸ್ವರ್ಣೆಯ ರಕ್ಷಣೆಗೆ ಕಂಕಣಬದ್ಧರಾಗುವಂತೆ ಉಡುಪಿಯ ಸಮಸ್ತ ಜನತೆಗೆ ಕರೆ ನೀಡಿದರು. ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ […]