ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಉಡುಪಿ: ಕುಂದಾಪುರದ ಶಿಕ್ಷಕರೊಬ್ಬರಿಗೆ ಅಂತಿಮಗೊಳಿಸಲಾಗಿದ್ದ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಇಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರಕಾರದ ಸೇಡಿನ ರಾಜಕಾರಣದ ವಿರುದ್ಧ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಹೊತ್ತು ಮಾನವ ಸರಪಳಿ ರಚಿಸಿ ಮಣಿಪಾಲ-ಉಡುಪಿ ಹೆದ್ದಾರಿ ತಡೆದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು. ಶಾಸಕ ಯಶ್ ಪಾಲ್ […]