ಟಿ.ಜೆ. ಅಬ್ರಹಾಂ 193 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದಾಗ ರಾಜೀನಾಮೆ ನೀಡಿದ್ದೀರಾ?

ಉಡುಪಿ: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳಿರುವ ಪ್ರಮೋದ್ ಮಧ್ವರಾಜ್ ಅವರೇ, ತಾವು ಸಚಿವರಾಗಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ 193 ಕೋಟಿ ರೂಪಾಯಿ ಮೊತ್ತದ ವಂಚನೆ ದೂರು ದಾಖಲಿಸಿದ್ದ ವೇಳೆ ತಾವು ರಾಜೀನಾಮೆ ನೀಡಿದ್ದೀರಾ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ. ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪತ್ರಿಕಾ ಹೇಳಿಕೆಯಲ್ಲಿ ತಿರುಗೇಟು ನೀಡಿದ ಕಾಂಚನ್ ಅವರು, ಪ್ರಮೋದ್ ಮಧ್ವರಾಜ್ […]