ದುಡಿಮೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೈಲರ್ಸ್: ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ

ಉಡುಪಿ: ಕೋವಿಡ್ 19 ಲಾಕ್ ಡೌನ್ ನಿಂದಾಗಿ ಹೊಲಿಗೆ ವೃತ್ತಿ (ಟೈಲರ್) ಬಾಂಧವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿರುವವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ನ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದಯಾನಂದ ಕೋಟ್ಯಾನ್ ಕೊರಂಗ್ರಪಾಡಿ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೈಲರ್ಸ್ ಬಾಂಧವರು ಈ ಮೊದಲೇ ಸಿದ್ಧ ಉಡುಪಿನ ಹಾವಳಿಯಿಂದ ತತ್ತರಿಸಿ ಹೋಗಿದ್ದು, ಕೋವಿಡ್ 19 […]