ಉಡುಪಿ: ಅನ್ ಲಾಕ್ ಮಾರ್ಗಸೂಚಿಯ ಉಲ್ಲಂಘನೆ ಆಗದಂತೆ ಕ್ರಮಕೈಗೊಳ್ಳಿ; ಡಿಸಿ ಜಿ. ಜಗದೀಶ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಜೂನ್ 14ರಿಂದ ಆರಂಭವಾಗುವ ಅನ್ ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು. ಅವರು ಇಂದು ವಿಡಿಯೋ ಸಂವಾದದ ಮೂಲಕ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು, ಎಲ್ಲಾ ಅಧಿಕಾರಿಗಳು ಮತ್ತು ಪಂಚಾಯತ್ ಗಳ ಸಹಕಾರದಿಂದ ಯಶಸ್ವಿಯಾಗಿ […]