ಉಡುಪಿ: ಫೆ.9ರಂದು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಇದೇ ಫೆ.9ರಂದು ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಬಿಎ ಆಚಾರ್ಯ ಮಣಿಪಾಲ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕೆ 205 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, 9.15 ರೂ. ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಿಸಲಾಗುವುದು. ಅಂದು 10 ಗಂಟೆಗೆ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ […]