ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರಿಗೆ ತಲ್ಲೂರ್ಸ್ ಜಾನಪದ ರತ್ನ ಪ್ರಶಸ್ತಿ ಪ್ರದಾನ

ಉಡುಪಿ: ಬಯಲು ಸೀಮೆಯ ಮೂಡಲಪಾಯ, ಉತ್ತರ ಕರ್ನಾಟಕದ ಶ್ರೀಕೃಷ್ಣ ಪಾರಿಜಾತಾ ಮೊದಲಾದ ಕಲಾಪ್ರಕಾರಗಳು ಸೂಕ್ತ ಪ್ರೋತ್ಸಾಹವಿಲ್ಲದೆ ಅಳಿವಿನಂಚಿನಲ್ಲಿವೆ. ಆದರೆ ಕರಾವಳಿಯ ಯಕ್ಷಗಾನ ಇಂದು ವಿಶ್ವಧರ್ಜೆಯ ಕಲೆಯಾಗಿ ಮೆರೆಯುವಂತೆ ಮಾಡಿದ ಇಲ್ಲಿನ ವಿದ್ಯಾವಂತರು, ಕಲಾ ಪ್ರೋತ್ಸಾಹಕರು ಅಭಿನಂದನಾರ್ಹರು ಎಂದು ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಹೇಳಿದರು. ಅವರು ಭಾನುವಾರ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಮಕ್ಕಳ ಮಂಟಪದಲ್ಲಿ ಭೂಮಿಕಾ ಹಾರಾಡಿ, ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ […]