ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಜೀವನದಲ್ಲಿ ಸ್ಪರ್ಧೆ ನಿರಂತರವಾಗಿದ್ದು, ಕ್ರೀಡಾಪಟುಗಳು ಕ್ರೀಡೆಯಲ್ಲಿ ಸೋತರೆ ಎದೆಗುಂದದೆ, ಸೋಲನ್ನು ಸವಾಲನ್ನಾಗಿ ಸ್ವೀಕರಿಸಿ, ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತಾನಾಡಿದರು. ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ಸುಗಳಿಸಬೇಕು ಎನ್ನುವ ಸಲುವಾಗಿ ಕ್ರೀಡಾಪಟುಗಳು ಅವಿರತ ಶ್ರಮವಹಿಸಿರುತ್ತಾರೆ. ಇಂತಹ […]