ಉಡುಪಿ: ಶ್ರೀಕೃಷ್ಣಮಠದಲ್ಲಿ ತಪ್ತಮುದ್ರಾಧಾರಣ ಸಂಭ್ರಮ

ಉಡುಪಿ: ಕಾರ್ತಿಕ ಶುದ್ಧ ಏಕಾದಶಿ ದಿನವಾದ ಇಂದು ಶ್ರೀಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣ ಕಾರ್ಯಕ್ರಮ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡರು. ಬಳಿಕ ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು. ಭಕ್ತರಿಗೆ ಶ್ರೀಗಳಿಂದ ಮುದ್ರಾಧಾರಣೆ: ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು. […]