ಶಿಕ್ಷಕರಿಂದ ಕಲಿತ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರವಲ್ಲದೇ ಜೀವನದುದ್ದಕ್ಕೂ ನೆನಯುವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಹಯೋಗದಲ್ಲಿ […]