ಉಡುಪಿ: ತೆಂಕನಿಡಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ.

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸ್ವಾಗತಿಸಿದರು. 26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದು, ಎಸ್ ಟಿ ಮೀಸಲಾತಿಯಲ್ಲಿ ಶೋಭಾ ಅವರು […]