ಉಡುಪಿ ರೈಲ್ವೆ ನಿಲ್ದಾಣ: ಇಬ್ಬರು ಶಂಕಿತ ಉಗ್ರರ ಬಂಧನ

ಉಡುಪಿ: ಕೇರಳದಿಂದ ಬಂದಿರುವ ಇಬ್ಬರು ಶಂಕಿತ ಉಗ್ರರನ್ನು ಇಂದು ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಚಿತ ಪಡಿಸಿದ್ದಾರೆ. ಬೆಳಿಗ್ಗೆ 10.30ರ ಸುಮಾರಿಗೆ ಇಬ್ಬರು ಶಂಕಿತರನ್ನು ಬಂಧಿಸಿರುವ ಪೊಲೀಸರು,  ಆ ಇಬ್ಬರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯದ್ದು ತೀವ್ರ ವಿಚಾರಣೆಗೆ ಒಳಡಿಸಿದ್ದಾರೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದಿದ್ದ ಉಗ್ರರು ಕೇರಳ ಮೂಲಕ ಕರ್ನಾಟಕ ಕರಾವಳಿಯಲ್ಲಿ ಬೀಡು ಬಿಟ್ಟಿರುವ ಸಾಧ್ಯತೆಯಿದ್ದು, […]