ಉಡುಪಿ: ಜಿಲ್ಲಾಡಳಿತದಿಂದ ಸರಳವಾಗಿ 65ನೇ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಭಾನುವಾರ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಜಿ.ಜಗದೀಶ್ ತಾಯಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕರಾವಳಿ ಕಾವಲು ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆ ಮತ್ತಿತರ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 36 ಮಂದಿ ಸಾಧಕರಿಗೆ ಮತ್ತು 4 […]