ಉಡುಪಿ: ಐದಕ್ಕಿಂತ ಹೆಚ್ಚು ಕೊರೊನಾ ಸೋಂಕು ಕಂಡುಬರುವ ಪ್ರದೇಶ ಸೀಲ್ ಡೌನ್; ಸುನಿಲ್ ಕುಮಾರ್
ಉಡುಪಿ: ಐದು ಅಥವಾ ಅದಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಕಂಡುಬರುವ ಪ್ರದೇಶವನ್ನು ಮೈಕ್ರೋ ಕಂಟೋನ್ಮೆಂಟ್ ಜೋನ್ (ಸೀಲ್ ಡೌನ್) ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದರು. ಸಾಧ್ಯವಾದಷ್ಟು ಕೋವಿಡ್ ಪೋಸಿಟಿವ್ ರೋಗಿಗಳನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ […]