ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ

ಉಡುಪಿ: ಇತಿಹಾಸ ಪ್ರಸಿದ್ಧ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸೋಮವಾರ ಅದ್ಧೂರಿಯಾಗಿ ನೆರವೇರಿತು. ಪಾಡಿಗಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಹತ್ತಾರು ವೈದಿಕರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇಗುಲದಲ್ಲಿ ಬೆಳಿಗ್ಗೆಯಿಂದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಶ್ರೀದೇವರಿಗೆ ವಿವಿಧ ಪೂಜಾಕೈಂಕರ್ಯಗಳನ್ನು ನಡೆಸಲಾಯಿತು‌. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಬಾರಿ ಸುಮಾರು ₹ 90 ಲಕ್ಷ ವೆಚ್ಚದಲ್ಲಿ ಪರಿವಾರ ದೇವರುಗಳಾದ ಶ್ರೀಗಣಪತಿ, ಶ್ರೀಉಮಾಮಹೇಶ್ವರ, ಆಂಜನೇಯ ಗುಡಿಗಳು ಹಾಗೂ ಪರಿವಾರ ದೈವಗಳಾದ ರಕ್ತೇಶ್ವರಿ, ನಂದಿಗೋಣ ಬೊಬ್ಬರ್ಯ, ಪಂಜುರ್ಲಿ, ಬೈಕಾಡ್ತಿ […]