ಉಡುಪಿ: ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮಕ್ಕೆ ಚಾಲನೆ
ಉಡುಪಿ: ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ’ ಕಾರ್ಯಕ್ರಮಕ್ಕೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಇಂದು ಚಾಲನೆ ನೀಡಲಾಯಿತು. ನಾಲ್ಕೂರು ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಇತರೆ ಅಧಿಕಾರಿಗಳಿಗೆ ಗ್ರಾಮದ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಚೆಂಡೆ, ವಾದ್ಯದೊಂದಿಗೆ ಜಿಲ್ಲಾಧಿಕಾರಿ ಅವರನ್ನು ಗ್ರಾಮದ ಸಭಾಂಗಣಕ್ಕೆ ಬರ ಮಾಡಿಕೊಳ್ಳಲಾಯಿತು. ಬಳಿಕ ನೇರವಾಗಿ ನಾಲ್ಕೂರು ಸರ್ಕಾರಿ ಪ್ರೌಢಶಾಲೆಗೆ ತೆರಳಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಸಂವಾದ […]